ಅಭಿಪ್ರಾಯ / ಸಲಹೆಗಳು

ದೃಷ್ಟಿ ಮೂಲೋದ್ದೇಶಗಳು ಕಾರ್ಯಾಚರಣೆ

ದೃಷ್ಟಿ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು ಉಪ್ಪಾರ ಹಾಗೂ ಅದರ ುಪಜಾತಿಗಳಿಗೆ ಸೇರಿದ ಜನರಿಗೆ ಅವರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಲು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಸಹಾಯ ಮಾಡುತ್ತದೆ. 

 ಗುರಿ

ಈ ಗುರಿಯನ್ನು, ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ರೂಪದಲ್ಲಿ ಹಣಕಾಸಿನ ನೆರವು ನೀಡುವುದರ ಮೂಲಕ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿಪರ ಗುಂಪುಗಳಿಗೆ ಅವರ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ಅವರ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಲು ಸಾಲ ಮತ್ತು ಸಹಾಯಧನ ರೂಪದಲ್ಲಿ ಹಣಕಾಸಿನ ನೆರವು ನೀಡುವುದರ ಮೂಲಕ ಮತ್ತು ಸಣ್ಣ ಮತ್ತು ಅತಿಸಣ್ಣ ರೈತರ ಭೂಮಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಾಧಿಸಲಾಗುವುದು.

ಮೂಲೋದ್ದೇಶಗಳು

1.      ಆರ್ಥಿಕ ಪ್ರಗತಿಗಾಗಿ ಹಿಂದುಳಿದ ವರ್ಗದ ಬಡ ವರ್ಗಕ್ಕೆ ಸೇರಿದ ಕುಟುಂಬಗಳಿಗೆ ಆರ್ಥಿಕ ನೆರವು.

2.    ಗಂಗಾ ಕಲ್ಯಾಣ ಯೋಜನೆಯಡಿ ಹಿಂದುಳಿದ ವರ್ಗದವರಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.

3.    ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಅವರ ಉತ್ಪಾದಕ ಘಟಕಗಳನ್ನು ಸ್ಥಾಪಿಸಲು ಹಣಕಾಸಿನ ನೆರವು

ಕಾರ್ಯಾಚರಣೆ

1.       ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ಆರ್ಥಿಕ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತೇಜಿಸುವುದು.

2.      ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ಸ್ವಯಂ ಉದ್ಯೋಗ ಮತ್ತು ಇತರ ಉದ್ಯಮಗಳನ್ನು ಉತ್ತೇಜಿಸುವುದು

3.      ವೃತ್ತಿಪರ / ತಾಂತ್ರಿಕ ಶಿಕ್ಷಣವನ್ನು ಪಡೆಯಲು ಹಿಂದುಳಿದ ವರ್ಗಗಳಿಗೆ ಸಾಲವನ್ನು ವಿಸ್ತರಿಸುವುದು.

4.      ಉತ್ಪಾದನಾ ಘಟಕಗಳ ಸರಿಯಾದ ಮತ್ತು ಪರಿಣಾಮಕಾರಿ ನಿರ್ವಹಣೆಗಾಗಿ ಕುಶಲಕರ್ಮಿಗಳು ಮತ್ತು ವೃತ್ತಿಪರ ಗುಂಪುಗಳ ತಾಂತ್ರಿಕ ಮತ್ತು ಉದ್ಯಮಶೀಲತೆಯ ಕೌಶಲ್ಯವನ್ನು ಹೆಚ್ಚಿಸಲು ಸಹಾಯ.

5.      ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸುವುದು.

ಇತ್ತೀಚಿನ ನವೀಕರಣ​ : 29-03-2021 04:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080